ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರ ಸಮಾರಂಭಕ್ಕೆ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ
ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿದೆ. ಆಹ್ವಾನ ಪತ್ರಿಕೆಯನ್ನು ಈಗಾಗಲೇ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸ್ವೀಕರಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಇಂದು ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಭಾರತವು ಅನೇಕ ನೆರೆಯ ದೇಶಗಳಿಗೆ ಆಹ್ವಾನಗಳನ್ನು ಕಳುಹಿಸಿದೆ. ಇವರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಭೂತಾನ್, ಮಾಲ್ಡೀವ್ಸ್ ಮತ್ತು ಮಾರಿಷಸ್ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೂನ್ 9 ರ ಆದಿತ್ಯವಾರ ಸಂಜೆ 7.15ಕ್ಕೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.