ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2019ರಲ್ಲಿ ಜಾರಿಗೆ ತಂದಿದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕಿಸಾನ್ ಸಮ್ಮಾನ್ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಮಾಡಬಹುದು.
- ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ