ಎರಡು ಕಡೆ ಗೆದ್ದಿರುವ ರಾಹುಲ್ ಗಾಂಧಿ ನಿಯಮ ಪ್ರಕಾರ ಒಂದು ಸ್ಥಾನವನ್ನು ಬಿಟ್ಟು ಕೊಡಬೇಕಿದೆ.
ಇದೀಗ ಅವರು ರಾಯ್ ಬರೇಲಿಯನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ತ್ಯಜಿಸಲು ನಿರ್ಧರಿಸಿದ್ದಾರೆ.
ಈ ಸ್ಥಾನದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿ ಕಣಕ್ಕಿಳಿಯಲಿದ್ದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನಾನು ವಯನಾಡಿನ ಜನತೆ ಜತೆ ಕಳೆದ ಐದು ವರ್ಷಗಳಿಂದ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ಕಳೆದ ಐದು ವರ್ಷಗಳಿಂದ ವಯನಾಡು ಸಂಸದನಾಗಿದ್ದ ನನಗೆ ಅಲ್ಲಿನ ಜನ ತೋರಿಸಿದ ಪ್ರೀತಿ, ಬೆಂಬಲ ಅಪಾರವಾದುದು. ಈಗ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ.
ನಾನು ಕೂಡ ವಯನಾಡಿಗೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಇನ್ನು ವಯನಾಡಿಗೆ ಇಬ್ಬರು ಸಂಸದರು ಇರಲಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ