ಶ್ರೀನಗರದಲ್ಲಿ ನಡೆಯುವ 10 ನೇ ಅಂತರರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಪ್ರಧಾನಿ ಮೋದಿ ಬಾಗಿ
ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ನಡೆಯುವ ಬಗ್ಗೆ ದೆಹಲಿಯಲ್ಲಿ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಜಾಧವ್, ಈ ವರ್ಷದ ಥೀಮ್ ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ತೋರಿಸುತ್ತದೆ ಎಂದು ಹೇಳಿದರು.
ಭಾರತವಲ್ಲದೇ ವಿದೇಶಗಳಲ್ಲಿ ಸಹ ಯೋಗವನ್ನು ಒಪ್ಪಿಕೊಂಡಿದ್ದಾರೆ ಮತ್ತು ಯೋಗದಿಂದ ಬದಲಾವಣೆಯನ್ನು ಕಂಡಿದ್ದಾರೆ ವಿಶ್ವವೇ ಯೋಗವನ್ನು ಮೆಚ್ಚಿಕೊಂಡಿದೆ ಎಂದು ಜಾದವ್ ತಿಳಿಸಿದರು.
ಶ್ರೀನಗರದಲ್ಲಿ ಜೂನ್ 21ರಂದು ನಡೆಯಲಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಯೋಗ ದಿನವನ್ನು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಚರಿಸಲಾಗುವುದು. ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಥೀಮ್ ವೈಯಕ್ತಿಕ ಮತ್ತು ಸಮಾಜಕ್ಕಾಗಿ ಯೋಗ ದಿನಾಚರಣೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಜಾಧವ್, ಈ ವರ್ಷದ ಥೀಮ್ ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುತ್ತದೆ.
ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಬೆಳೆಸುತ್ತದೆ. ಇದು ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಲಕ್ಷಾಂತರ ಜನರು ಉತ್ಸಾಹದಿಂದ ಭಾಗವಹಿಸುತ್ತಿರುವುದು ಸಮುದಾಯಗಳ ಮೇಲೆ ಯೋಗದ ತೀವ್ರ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.