ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ನಿಗದಿಯಾಗಿದೆ, ಡಿಸೆಂಬರ್ 20 ರಿಂದ ಮಂಡ್ಯದಲ್ಲಿ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಸಿಎಂ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದರು.