ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ವಾಲ್ಮೀಕಿ ನಿಗಮದಲ್ಲಿ ನಡೆದ ಗೋಲ್ ಮಾಲ್ ವಿಚಾರವಾಗಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಯಿತು.
ನಗರದ ಕ್ಲಾಕ್ ಟವರ್ ಬಳಿ ಜಮಾಯಿಸಿ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮುರಿದು ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದ ಹಲವಾರು ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.