• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

July 9, 2024
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

by ಪ್ರಜಾಧ್ವನಿ ನ್ಯೂಸ್
July 9, 2024
in ಅಂತರರಾಜ್ಯ, ಉಡುಪಿ, ಕ್ರೈಮ್, ದಕ್ಷಿಣ ಕನ್ನಡ, ರಾಜ್ಯ
0
ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
194
SHARES
553
VIEWS
ShareShareShare

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಮನೆ ದರೋಡೆ ನಡೆಸಿದ ನಾಲ್ವರು (ಚಡ್ಡಿ ಗ್ಯಾಂಗ್) ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ashwinistudioputtur

ಜಾಹೀರಾತು

ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಗೋಗರ್ ತಾಲೂಕು ವಿಶ್ವನಗರದ ರಾಜು ಸಿಂಗ್ವಾನಿಯ (24), ಭೂಪಾಲ್, ಗುಲಾಬ್ಗಂಜ್‌ನ ಮಯೂರ್ (30), ಆಶೋಕನಗರ ಮಾಧವ್ಗಡ್ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ಬಂಧಿತರು.

ಪ್ರಕರಣದ ವಿವರ: ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎಂಬವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿತ್ತು. ವಿಕ್ಟರ್ ಮೆಂಡೋನ್ಸಾ ಹಾಗೂ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಹಲ್ಲೆ ನಡೆಸಿ, ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, 3000 ರೂ. ನಗದು ಸುಲಿಗೆ ಮಾಡಿ, ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.

Muliya

ಜಾಹೀರಾತು

ಮಿಂಚಿನ ಕಾರ್ಯಾಚರಣೆ: ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದಾರೆ. ಈ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ತಕ್ಷಣ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಯಿತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಈ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದಾರೆ. ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ. ಉರ್ವ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ.

ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿವರ:

1) ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

2) ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.

3) ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ

4) ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು
ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿರುತ್ತಾರೆ

SendShare78Share
Previous Post

ಹಿಟ್ ಅಂಡ್ ರನ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Next Post

ಸಿದ್ದರಾಮಯ್ಯ 10 ಖಡಕ್ ಸೂಚನೆ; ಅಧಿಕಾರಿಗಳಿಗೆ ಚುರುಕಿನ ಆಡಳಿತಕ್ಕೆ 3 ತಿಂಗಳ ಗಡುವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ 10 ಖಡಕ್ ಸೂಚನೆ; ಅಧಿಕಾರಿಗಳಿಗೆ ಚುರುಕಿನ ಆಡಳಿತಕ್ಕೆ 3 ತಿಂಗಳ ಗಡುವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In