ಮಂಗಳೂರು : ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದರು. ಜುಲೈ 8ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರು ಆಧರಿಸಿ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತು. ಇನ್ನು ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.
ಸೋಮವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಸಕ ಡಾ.ಭರತ್ ಶೆಟ್ಟಿ, ಸಂಸತ್ತಿನ ಒಳಗೆ ರಾಹುಲ್ ಗಾಂಧಿಗೆ ಕಪಾಳಮೋಕ್ಷ ಮಾಡಬೇಕು ಅನ್ನಿಸುತ್ತಿದೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.