ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು. ಇವರ ಪತಿ ರಮಾನಂದ ಶೆಟ್ಟಿ ಜು.15ರ ಸೋಮವಾರ ಸಾವನ್ನಪ್ಪಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಅಶ್ವಿನಿ ಶೆಟ್ಟಿ ಅವರು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕವಾಗಿ ಕ್ರಿಯಾಶೀಲರಾಗಿದ್ದರು. ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಬಂಟರ ಸಂಘ, ಸಾಮಾಜಿಕ ಜಾಲಾತಾಣದಲ್ಲಿ ಸಕ್ರಿಯರಾಗಿದ್ದು ಪ್ರಮುಖವಾಗಿ ಬಲ್ಲಾಳ್ಸ್ ಕಾಬ್ಸೋ ಎಂಬ ಪೇಸ್ ಬುಕ್ ಇಸ್ಟಾಗ್ರಾಂ ಫೇಜ್ ಮೂಲಕ ದಿನನಿತ್ಯದ ಬದುಕಿ ಸಂಸ್ಕೃತಿ ಮತ್ತು ಸಂಸ್ಕಾರಗಳ ಬಗ್ಗೆ ವಿಡಿಯೋ ಮೂಲಕ ಜಾಗೃತಿ ಮೂಡಿಸುತ್ತಿದ್ದರು. ತುಳುನಾಡಿನ ಆಚಾರ-ವಿಚಾರಗಳನ್ನು ಬಿಂಬಿಸುವ ವೀಡಿಯೋಗಳನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿ ಖ್ಯಾತಿ ಗಳಿಸಿದ್ದರು. ಇವರ ನಿಧನ ಅಪಾರ ಅಭಿಮಾನಿಗಳಿಗೆ ನೋವು ನೀಡೀದ್ದು ಇವರ ಹಿಂದಿನ ಮಾತಿನ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಸೋಮವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅಂಬಲಪಾಡಿಯ ಗಾಂಧಿ ನಗರದ ಮನೆಯೊಂದರಲ್ಲಿ ಜು.15ರ ಸೋಮವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಮಕ್ಕಳಾದ ಹಂಸಿಜಾ (20) ಮತ್ತು ಅಭಿಕ್ (16) ಪಾರಾಗಿದ್ದಾರೆ.
























