ಸಕಲೇಶಪುರದ ದೊಡ್ಡತಪ್ಲು ಬಳಿ ಭೂಕುಸಿತದಿಂದಾಗಿ ಶಿರಾಡಿ ಘಾಟಿ ರಸ್ತೆಯಲ್ಲಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಶನಿವಾರದಿಂದ ಪುನರಾರಂಭಗೊಂಡಿದೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಘಾಟಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಸಂಚಾರ ಆರಂಭಗೊಂಡಿದೆ.
ದೊಡ್ಡತಪ್ಲು ಬಳಿ ಪದೇ ಪದೇ ಭೂಕುಸಿತ ಸಂಭವಿಸುತ್ತಿದ್ದು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲಿ ಇದ್ದು ಕಾರ್ಯಚರಣೆ ನಡೆಸುವ ಮೂಲಕ ವಾಹನ ಸವಾರರಿಗೆ ಅನುವು ಮಾಡಿಕೊಡುತ್ತಿದ್ದಾರೆ.
ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೌದು, ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆ ಆದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೂ, ನಿರ್ಬಂಧಿತ ಸಂಚಾರಕ್ಕೆ ಅವಕಾಶ ನೀಡಿ ಸಕಲೇಶಪುರ ಉಪ ವಿಭಾಗ ಅದಿಕಾರಿ ಶೃತಿ ಆದೇಶಿಸಿದ್ದಾರೆ.