ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಕಾರ್ಕಳ, ಅಂಕೋಲಾ, ಸಿದ್ದಾಪುರ, ಆಗುಂಬೆ, ಮುಲ್ಕಿ, ಧರ್ಮಸ್ಥಳ, ಬೆಳ್ತಂಗಡಿ, ಕುಂದಾಪುರ, ಗೋಕರ್ಣ, ಕುಮಟಾ, ಶಿರಾಲಿ, ಕಾರವಾರ, ಉಪ್ಪಿನಂಗಡಿ, ಪುತ್ತೂರು, ಮಂಗಳೂರು, ಮಾಣಿ, ಕೋಟ, ಉಡುಪಿ, ಸುಳ್ಯ, ಶೃಂಗೇರಿ, ಕಳಸದಲ್ಲಿ ಭಾರಿ ಮಳೆಯಾಗಿದೆ.