ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ಆಗುತ್ತಿದ್ದು, ಇಡೀ ಸಚಿವ ಸಂಪುಟ ಅವರ ಬೆನ್ನಿಗೆ ನಿಂತಿದೆ. ಸಿಎಂ ಸಿದ್ದರಾಮಯ್ಯ ಬರುವ ಗುರುವಾರ ಆ.22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಮೂಲಕ ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ. ಅಲ್ಲದೇ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರುವ ಬೆನ್ನಲ್ಲೇ ಈ ಶಾಸಕಾಂಗ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.
ಆಗಸ್ಟ್ 22 ರಂದು ಶಾಸಕಾಂಗ ಪಕ್ಷ(CLP) ಸಭೆ ಕರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ. ಅಲ್ಲದೇ ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಇಡೀ ಪ್ರಕರಣದ ಬೆಳವಣಿಗೆ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಲಿದ್ದಾರೆ. ಜೊತೆಗೆ ಮುಂದಿನ ಹೋರಾಟಗಳಿಗೆ ಶಾಸಕರ ಸಹಕಾರ ಕೋರಲಿದ್ದಾರೆ.