ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಬಂಧಿತರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರೋಡಿಗಿಳಿದಿದ್ದಾರೆ. ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಪ್ರತಿಭಟನೆ ವೇಳೆ ಬಸ್ಗೆ ಕಲ್ಲು ತೂರಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ ಹಾಗೂ ಕಾರ್ಯಕರ್ತರಾದ ಶಾಹುಲ್ ಹಮೀದ್, ಅನ್ವರ್ ಬಂಧಿತರು. ಪ್ರತಿಭಟನೆ ವೇಳೆ ಖಾಸಗಿ ಸಿಟಿ ಬಸ್ ತಡೆದು ಗೂಂಡಾಗಿರಿ ನಡೆಸಿದ್ದರು. ಈ ವೇಳೆ ಪೊಲೀಸರ ಎದುರೇ ಬಸ್ನ ಮುಂದಿನ ಗಾಜಿಗೆ ಕಲ್ಲುತೂರಿದ್ದಾರೆ. ಕಾಲಿನಿಂದ ಒದ್ದು ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಸದ್ಯ ಕಲ್ಲು ತೂರಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.