ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ.
ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ.
ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಪುತ್ತೂರಿನ ಪ್ರಭಾವಿ ರಾಜಕಾರಣಿ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದು, ಈ ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ಎದುರಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತರಗಳನ್ನು ನಡೆಯುವ ಬಗ್ಗೆ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆoದು ಪುತ್ತಿಲ ಸ್ಪಷ್ಟನೆ.
ಇದರಲ್ಲಿ ಮಹಿಳೆಯೂ ಪುತ್ತಿಲರು ಕಳೆದ ವಿಧಾನಸಭೆ ಚುನಾವಣೆಯಲ್ಲಿ 3.5 ಕೋಟಿ ರೂಪಾಯಿ ತೆಗೆದುಕೊಂಡಿರುವುದಾಗಿ ಆರೋಪಿಸಿದ್ದು, ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿತ್ತು.
























