ಸುಳ್ಯದ ವೀರ ಮಂಗಲ ನಿವಾಸಿ ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ. ಅಚ್ಚುತ್ತ ಪೂಜಾರಿಯವರ ಪತ್ನಿ ಮಾಡವು ಜೂನಿಯರ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಾಕಿಯಾಗಿರುವ ಶ್ರೀಮತಿ ಸುನಂದ ಅಚ್ಚುತ್ತ ಪೂಜಾರಿಯವರು ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೆಲ ದಿನಗಳ ಹಿಂದೆ ಬೈಕಿನಲ್ಲಿ ಹೋಗುತ್ತಿರುವಾಗ ಕೆಳಗೆ ಬಿದ್ದು ತಲೆಗೆ ತೀವ್ರತರದ ಪೆಟ್ಟಾಗಿತ್ತು.
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡುಮನೆ ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಯರವರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರು, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ರಸ್ತೆಗೆ ಬಿದ್ದು ತಲೆಗೆ ತೀವ್ರತರಾದ ಏಟಾಯಿತು. ಇದರಿಂದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.ಆಗಿದ್ದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.