ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ.
ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಹೀಗಾಗಿ ಅದೇ ಬಿಲ್ಡಿಂಗ್‌ನ ಅಕ್ಕಪಕ್ಕದವರು ಇಂದು ಮಹಾಲಕ್ಷ್ಮಿ ಸಂಬಂಧಿಕರಿಗೆ ಹೇಳಿದ್ದಾರೆ. ಮನೆ ಬೀಗ ತೆಗೆದ ಸಂದರ್ಭದಲ್ಲಿ ಶವದಿಂದ ಹುಳಗಳ ಹೊರಗೆ ಬರುತ್ತಿತ್ತು ಎನ್ನಲಾಗಿದೆ.
10 ರಿಂದ 15 ದಿನಗಳ ಹಿಂದೆ ಕೊಲೆ ನಡೆದಿದೆ ಎನ್ನಲಾಗಿದೆ. ಕಳೆದ ಮೂರು ತಿಂಗಳ ಹಿಂದಷ್ಟೆ ಮಹಾಲಕ್ಷ್ಮಿ ಬಾಡಿಗೆ ಮನೆಗೆ ಬಂದಿದ್ದಳು. ಯುವಕನೊರ್ವ ಆಕೆಯನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡುತ್ತಿದ್ದ. ಆತನೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. 30ಕ್ಕೂ ಹೆಚ್ಚು ತುಂಡುಗಳನ್ನಾಗಿ ದೇಹವನ್ನು ಕತ್ತರಿಸಿ ಬಳಿಕ ಫ್ರಿಜ್ಜ್‌ನಲ್ಲಿ ಇಟ್ಟು ಕೊಲೆಗಾರ ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಸ್ಥಳೀಯರಿಂದ ಮಾಹಿತಿ ಕಲೆ ಹಾಕುತ್ತಿದ್ದು, ಅಕ್ಕ ಪಕ್ಕದ ಮನೆಗಳ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗುತ್ತಿದೆ.