ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಜಗನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ. ಮಂಡ್ಯದ ಸರ್ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.
ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್ಡಿ ಕುಮಾರಸ್ವಾಮಿ ಅವರು ಎನ್. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾಗೆ ಕೆಲಸ ಕೊಡಿಸಿದ್ದಾರೆ.