ಮಂಗಳೂರು: 2021ರ ನವೆಂಬರ್ 21ರಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರು ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್ನಿಂದ ಗಲ್ಲು ಶಿಕ್ಷೆ ಪ್ರಕಟಿಸಲಾಗಿದೆ. ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
ಮಂಗಳೂರು ಹೊರವಲಯದ ಪರಾರಿ ಹೆಂಚಿನ ರಾಜ್ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ಬಳಿಕ ಕೊಲೆ ಮಾಡಲಾಗಿತ್ತು. ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶದ ಕಾರ್ಮಿಕರಿಂದ ಕೃತ್ಯವೆಸಗಲಾಗಿತ್ತು. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.