ಉಚ್ಚಿಲ: ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಯುವತಿಯರು.
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಗೆ ಆಗಮಿಸಿದ್ದರು. ಇಂದು ಬೆಳಿಗ್ಗೆ ಬೀಚ್ ಬಳಿಯ ರೆಸಾರ್ಟ್ನ ಸ್ವಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೃತಪಟ್ಟಿದ್ದಾರೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತ ದುರ್ವೈವಿಗಳು.
ಮೈಸೂರು ಮೂಲದ ಯುವತಿಯರು ನಿನ್ನೆ(ನವೆಂಬರ್ 16) ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು (ನವೆಂಬರ್ 17) ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ನಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.