ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ದಿನಾಂಕ 7-9-2026ರಂದು ಸುಭದ್ರ ಸಭಾಂಗಣದಲ್ಲಿ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರ ಸಭಾಧ್ಯಕ್ಷತೆಯಲ್ಲಿ ನಡೆಯಿತು. ಟ್ರಸ್ಟಿನ ಅಧ್ಯಕ್ಷರಾಗಿ ಶ್ರೀರಾಮ್ ಭಟ್ ಪಾತಾಳ ಇವರನ್ನು ಸರ್ವಾನುಮತದಿಂದ...
ಪುತ್ತೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಿಕ್ಷಾ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆಯೊಬ್ಬರು ಸೆ.9ರಂದು ಬೆಳಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು....
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳ ಕಳ್ಳತನ ಕುರಿತಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ (79 ವ.) ಸೆ. 9ರಂದು ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಎಸ್.ಕೆ.ಜಿ.ಐ ಬ್ಯಾಂಕಿನ ಫಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಅವರು ಕೆಲ ಸಮಯಗಳಿಂದ ನಿವೃತ್ತಿ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ ಸುಜಾತಾ,...
ಪುತ್ತೂರು: ಸಮಾಜದ ಸಮಯೋಚಿತ ವರದಿ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆಯು ಸೆ.9ರಂದು ಬೈಪಾಸ್ ರಸ್ತೆಯಲ್ಲಿರುವ ಬಪ್ಪಳಿಗೆ ಟವರ‍್ಸ್‌ನಲ್ಲಿ ನಡೆಯಲಿದೆ ಎಂದು ನಿಮಿಷ ನ್ಯೂಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಲಾಲ್ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು....
ಪುತ್ತೂರು: ಸೆ. 18 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಸಭೆ ನಡೆಯುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳ ಪರಿಶೀಲನೆ ನಡೆಸಿದರು. ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ...
ಪುತ್ತೂರು : ಅಖಿಲ ಭಾರತ ತುಳು ಒಕ್ಕೂಟ ನಿಯೋಗ ಇಂದು ಪುತ್ತೂರು ಶಾಸಕರಾದ ಅಶೋಕ ಕುಮಾರ್ ರೈ ಕೋಡಿಂಬಾಡಿ ಇವರನ್ನು ಬೇಟಿ ಮಾಡಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಡ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜವಾದ್ (32 ವ.), ಸಾಹಿದ್ (32 ವ.) ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್...
ಮೊಗ್ರು. ಸೆ.6. ಬೆಳಂಗಡಿ ತಾಲೂಕಿನ ಮೊಗ್ರು ಗ್ರಾಮದ ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ.) ಮುಗೇರಡ್ಕ -ಅಲೆಕ್ಕಿ ಇದರ ಶ್ರೀ ರಾಮ ಶಿಶು ಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ ಮತ್ತು ಮಕ್ಕಳ ಧಾರ್ಮಿಕ ಹಾಗೂ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ...